ತುಮಕೂರು :


ಪ್ರತಿಯೊಬ್ಬರೂ ಮರಣಾಂತರ ನೇತ್ರದಾನ ಮಾಡುವ ಮೂಲಕ ದೃಷ್ಟಿಹೀನರ ಬಾಳಿಗೆ ಬೆಳಕಾಗಬೇಕು ಎಂದು ಜಿಲ್ಲಾಧಿಕಾರಿ ವೈ .ಎಸ್. ಪಾಟೀಲ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತುಮಕೂರು ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿಂದು ವಿಶ್ವವಿದ್ಯಾಲಯದ ಡಾ: ಸದಾನಂದಮಯ್ಯ ಕಟ್ಟಡದ ಆವರಣದಲ್ಲಿ ನಡೆದ 37ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನೇತ್ರದಾನವು ಶ್ರೇಷ್ಠ ದಾನವಾಗಿದ್ದು, ಅಂಧತ್ವ ನಿವಾರಣೆಯಲ್ಲಿ ಸಾರ್ವಜನಿಕರ ಪಾತ್ರ ಮಹತ್ವದಾಗಿದೆ. ನೇತ್ರದಾನದ ಶ್ರೇಷ್ಠತೆ ಅರಿತು ಸ್ವಯಂಪ್ರೇರಿತರಾಗಿ ಎಲ್ಲರೂ ನೇತ್ರದಾನ ಮಾಡಬೇಕು. ದೇಶದಲ್ಲಿ ಲಕ್ಷಾಂತರ ಜನರು ದೃಷ್ಟಿರಹಿತರಾಗಿದ್ದು, ಮರಣದ ನಂತರ ಮಣ್ಣಲ್ಲಿ ಮಣ್ಣಾಗುವ ಬದಲು ಕಣ್ಣನ್ನು ದಾನ ಮಾಡಿ ಅಂಧರ ಜೀವನವನ್ನು ಬೆಳಕಾಗಿಸುವ ಪುಣ್ಯದ ಕೆಲಸದಲ್ಲಿ ಭಾಗಿಯಾಗಬೇಕು. ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಂಜುನಾಥ್ ಅವರು ಪ್ರತಿ ವರ್ಷ ಆಗಸ್ಟ್ 25 ರಿಂದ ಸೆಪ್ಟೆಂಬರ್ 8ರವರೆಗೂ ‘ರಾಷ್ಟ್ರೀಯ ನೇತ್ರದಾನ ಪಾಕ್ಷಿಕ’ (ಐ ಡೊನೇಷನ್ ಫೆÇೀರ್ಟ್‍ನೈಟ್ಲಿ)ವನ್ನಾಗಿ ಆಚರಿಸಲಾಗುತ್ತದೆ ಎಂದರು.
ನೇತ್ರ ತಜ್ಞ ಡಾ|| ದಿನೇಶ್ ಮಾತನಾಡಿದರು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ತುಮಕೂರು ಜಿಲ್ಲೆ ಇವರ ದೂ.0816-2275230ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ಶ್ರೀದೇವಿ ತಿಳಿಸಿದರು.
ಇದೇ ವೇಳೆ ನೇತ್ರದಾನ ಮಾಡುವವರಿಗೆ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಕೆ.ಶಿವಚಿತ್ತಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಎ ವೀರಭದ್ರಯ್ಯ, ಹಾಗೂ ಡಾ.ಕಲ್ಲೇಶ್ವರ್ ಕೆ.ಪಿ, ಡಾ.ಮಂಜುನಾಥ್, ಡಾ.ಪೂರ್ಣಿಮಾ, ಡಾ.ಲಕ್ಷ್ಮೀಕಾಂತ್, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗದ ಯಶೋಧ ಬಿ.ಎನ್., ಆರೋಗ್ಯ ಸಿಬ್ಬಂದಿಗಳು, ಮತ್ತಿತರರು ಹಾಜರಿದ್ದರು.

(Visited 1 times, 1 visits today)