ತುಮಕೂರು
ಸರ್ಕಾರಿ ಅಧಿಕಾರಿಗಳು, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಜವಾಬ್ದಾರಿಯನ್ನು ಸರ್ಕಾರವು ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ದ ಮೂಲಕ ನೀಡಿದ್ದು, ಈ ಕಾರ್ಯಕ್ರಮವು ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ನುಡಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಶೈಕ್ಷಣಿಕ ದತ್ತು ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಶಾಲಾ-ಕಾಲೇಜುಗಳಲ್ಲಿನ ಸಂಪನ್ಮೂಲಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಕೆ ಮಾಡಿ, ಶಿಕ್ಷಣ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಎಲ್ಲ ಇಲಾಖೆಗಳ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲ ಹಂತದ ಅಧಿಕಾರಿಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡುವ “ಶೈಕ್ಷಣಿಕ ದತ್ತು ಕಾರ್ಯಕ್ರಮ”ವನ್ನು ಸರ್ಕಾರ ರೂಪಿಸಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ. ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಸೇರಿದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಪದವಿ-ಪೂರ್ವ ಕಾಲೇಜು ಯಾವದಾದರೂ ಒಂದು ಶಾಲೆಯನ್ನು ದತ್ತು ಪಡೆದು, ನಿರಂತರ ಸಂಪರ್ಕದಲ್ಲಿದ್ದು, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಕಾರ್ಯಕ್ರಮ ಇದಾಗಿದೆ.
ಅಧಿಕಾರಿಗಳು ತಾವು ದತ್ತು ಪಡೆದ ಶಾಲೆ, ಕಾಲೇಜಿಗೆ ತಿಂಗಳಿಗೆ ಕನಿಷ್ಟ ಒಂದು ಅಥವಾ ಎರಡು ಬಾರಿ ಭೇಟಿ ನೀಡುವುದು. ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕಿಸಿ, ಸಲಹೆ, ಮಾರ್ಗದರ್ಶನ ನೀಡುವುದು, ವಿದ್ಯಾರ್ಥಿಗಳ, ಪ್ರಾಂಶುಪಾಲರು, ಶಿಕ್ಷಕರ ಜೊತೆ ಸಂವಾದ ನಡೆಸಿ, ಶಾಲೆಯಲ್ಲಿ ಮೂಲ ಸೌಕರ್ಯಗಳು ಸರಿಯಾಗಿ ಬಳಕೆ ಆಗುತ್ತಿದೆಯಾ ಎಂದು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ಕೊಡಬಹುದು, ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಗಳನ್ನು ನಿಗದಿಪಡಿಸಿಕೊಂಡು, ಅವುಗಳನ್ನು ಸಾಧಿಸಲು ಪ್ರೇರಣೆ ನೀಡುವುದು.
ಕಪಾಟು, ಮೇಜುಗಳು, ವಿದ್ಯುತ್ ಸರಬರಾಜು ವ್ಯವಸ್ಥೆ, ಇಲಾಖೆಯ ಸಮುದಾಯದ ದತ್ತು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡುವುದು. ಕಲಿಕಾ ಪೂರಕ ಚಟುವಟಿಕೆಗಳಿಗೆ ಅಗತ್ಯವಾದ ಸಲಹೆ, ಶೌಚಾಲಯ, ಕಟ್ಟಡ ನಿರ್ಮಾಣ ನವೀಕರಣ, ಪೀಠೋಪಕರಣ, ಸೇರಿದಂತೆ ಕಾಂಪೌಂಡ್ ನಿರ್ಮಾಣ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಮಾರ್ಗದರ್ಶನ ನೀಡುವುದು, ಕರಕುಶಲ ಇತರ ಸಾಂಸ್ಕøತಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸುವುದು, ಏರ್ಪಡಲಿರುವ ಸಾಂಸ್ಕøತಿಕ ಕಾರ್ಯಕ್ರಮ, ವಿಜ್ಞಾನ ವಸ್ತು ಪ್ರದರ್ಶನ, ಅಕ್ಷರ ದಾಸೋಹದ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುμÁ್ಠನಕ್ಕೆ ಶಿಕ್ಷಕರಿಗೆ ಸಲಹೆ ನೀಡುವುದು, ದಾಸೋಹ ಕೊಠಡಿಯ ಸ್ವಚ್ಛತೆ ಕಾಪಾಡುವಂತೆ ನೋಡಿಕೊಳ್ಳುವುದಾಗಿದೆ, ಶಾಲೆ ಕೈಗೊಳ್ಳುತ್ತಿರುವ ಉತ್ತಮ ಕಾರ್ಯಗಳ ಮಾಹಿತಿ ಪಡೆದು, ಅಗತ್ಯವಾದ ಮಾರ್ಗದರ್ಶನ, ಪ್ರೇರಣೆ ನೀಡುವುದು. ಕುಂದು-ಕೊರತೆಗಳನ್ನು ನಿವಾರಣೆಗೆ ಸರ್ಕಾರ, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಪ್ರೇಮಿಗಳು, ದಾನಿಗಳ ನೆರವಿನಿಂದ ಅಗತ್ಯ ಕ್ರಮ ಕೈಗೊಳ್ಳುವುದು, ಈ ಕಾರ್ಯಕ್ರಮದ ಉದ್ದೇಶಗಳಾಗಿವೆ ಎಂದರು.
ನಾನು ಬೆಳ್ಳಾವಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಶೈಕ್ಷಣಿಕ ದತ್ತು ಪಡೆದಿದ್ದು, ಶಾಲೆಯ ಅಬಿವೃದ್ದಿಗೆ ಶ್ರಮಿಸಲಿದ್ದೇನೆ, ಸರ್ಕಾರಿ ಅಧಿಕಾರಿಗಳು/ನೌಕರರು ತಮ್ಮ ಉದಾರತೆ ತೋರುತ್ತಾರೆ ಎಂಬುದಕ್ಕೆ ಹಲವು ನಿರ್ದೇಶನಗಳು ಇದ್ದು, ಜಿಲ್ಲೆಯ ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಿಸಲು ಮತ್ತು ಶಾಲೆಗಳನ್ನು ಅಭಿವೃದ್ಧಿಪಡಿಸಲು ದತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿ ಶಾಲೆಗಳನ್ನು ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ವಿಶಿಷ್ಟವಾದ ಕಲ್ಪನೆಯಾಗಿದೆ, ಇದು ಉಳಿದವರಿಗೂ ಪ್ರೇರಣೆಯಾಗಲಿದೆ, ಈ ಕಾರ್ಯಕ್ರಮವು ಮಕ್ಕಳ ಸಮಗ್ರ ಹಿತ ಮತ್ತು ವಿದ್ಯಾರ್ಥಿಗಳ ಸವಾರ್ಂಗೀಣ ಅಭಿವದ್ಧಿ ಒಳಗೊಂಡಿದ್ದು, ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಲಿದೆ ಎಂದರು
ಈ ಸಂದರ್ಭದಲ್ಲಿ, ಉಪವಿಭಾಗಾಧಿಕಾರಿ ಅಜಯ್.ವಿ, ಭೂ ದಾಖಲೆಗಳ ಉಪನಿರ್ದೇಶಕರಾದ ಸುಜಯ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ನಂಜಯ್ಯ ಸೇರಿದಂತೆ ವಿವಿಧ ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.