ತುಮಕೂರು:
ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಸಹಯೋಗದಲ್ಲಿ ಫೆಬ್ರುವರಿ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತುಮಕೂರು-ಚಿತ್ರದುರ್ಗ ಜಿಲ್ಲೆಗಳ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ತಿಳಿಸಿದ್ದಾರೆ.
ಕಾರ್ಯಕ್ರಮಲ್ಲಿ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಶ್ರೀ ಸಿದ್ಧಲಿಂಗಸ್ವಾಮಿಗಳು ದಿವ್ಯಸಾನಿಧ್ಯವಹಿಸಲಿದ್ದಾರೆ. ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ.ಪರಮೇಶ್ವರ ನೆರವೇರಿಸುವರು.
ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಣ್ಣ ಕೈಗಾರಿಕಾ ಸಚಿವ ಎಸ್.ಆರ್ ಶ್ರೀನಿವಾಸ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಮುಜರಾಯಿ ಇಲಾಖಾ ಸಚಿವ ಪಿ.ಟಿ ಪರಮೇಶ್ವರ್ ನಾಯ್ಕ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಮುನಿರತ್ನ ಘನ ಉಪಸ್ಥಿತಿಯಲ್ಲಿರುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಲಲಿತ ರವೀಶ್, ಲೋಕಸಭಾ ಸದಸ್ಯ ಎಸ್.ಪಿ. ಮುದ್ದಹನುಮೇಗೌಡ, ಮತ್ತಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಫೆಬ್ರುವರಿ 16, 17ರಂದು ನಡೆಯುವ ಬೃಹತ್ ಉದ್ಯೋಗ ಮೇಳದ ಅವಧಿಯು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಡೆಯುತ್ತದೆ ಎಂದು ಅವರು ತಿಳಿಸಿದ್ದಾರೆ.