ತುರುವೇಕೆರೆ:
ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪರಿಚಿತ ಸ್ಕಾರ್ಪಿಯೋ ಕಾರು ಹಿಂಬದಿಯಿಂದ ಗುದ್ದಿದ ಪರಿಣಾಮ ವಾಹನ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ಶನಿವಾರ ಮದ್ಯಾಹ್ನ ನೆಡೆದಿದೆ.
ಮೃತ ದುರ್ದೈವಿ ಶಿವಶಂಕರ್ (50) ಇತನು ಮಾದಿಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ನೀರು ವಿತರಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶನಿವಾರ ಮಾಯಸಂದ್ರ ರಸ್ತೆಯಲ್ಲಿ ತನ್ನ ಟಿವಿಎಸ್ ದ್ವಿಚಕ್ರ ವಾಹನದಲ್ಲಿ ತುರುವೇಕೆರೆ ಕಡೆಗೆ ಚಲಿಸುವಾಗ ಹಿಂದಿನಿಂದ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಗುದ್ದಿದ ಪರಿಣಾಮ ದ್ವಿಚಕ್ರವಾಹನ ಸವಾರ ಬಿದ್ದು ತೀವ್ರತರವಾಗಿ ಗಾಯ ಗೊಂಡಿದ್ದಾರೆ. ಕೂಡಲೇ ಸ್ಥಳಿಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರು ಚಿಕಿತ್ಸೆ ಪಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರು ಎಂದು ತಿಳಿದುಬಂದಿದ್ದು ಕಾರು ನಿಲ್ಲಿಸದೆ ಚಾಲನೆ ಮಾಡಿಕೊಂಡು ತೆರಳಿದ್ದಾರೆ. ಪಟ್ಟಣದ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ಕಾರು ಶೋದ ಕಾರ್ಯ ಮುಂದುವರೆಸಿದ್ದಾರೆ.